Ezra 2:69 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.
Kannada BSI Bible 2016
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲೆ ಬೆಳ್ಳಿ, ನೂರು ಯಾಜಕವಸ್ತ್ರಗಳು.
Kannada Bible (KNCL) BSI 2016
ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - 400 ಕಿಲೋಗ್ರಾಂ ಬೆಳ್ಳಿ ಮತ್ತು ನೂರು ಯಾಜಕ ವಸ್ತ್ರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.