Ezra 2:70 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
Kannada BSI Bible 2016
ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ದೇವಸ್ಥಾನದಾಸ ಇವರೂ ಸಾಧಾರಣ ಜನರಲ್ಲಿ ಕೆಲವರೂ ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲ್ಯರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
Kannada Bible (KNCL) BSI 2016
ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.