Ezra 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
Kannada BSI Bible 2016
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.
Kannada Bible (KNCL) BSI 2016
ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.