Ezra 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
Kannada BSI Bible 2016
ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಸಹೋದರರು, ಕದ್ಮೀಯೇಲನು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
Kannada Bible (KNCL) BSI 2016
ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು.