Ezra 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರ್ತಷಸ್ತರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
Kannada BSI Bible 2016
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.
Kannada Bible (KNCL) BSI 2016
ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.