Ezra 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
Kannada BSI Bible 2016
ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ.
Kannada Bible (KNCL) BSI 2016
ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.