Ezra 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
Kannada BSI Bible 2016
ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.
Kannada Bible (KNCL) BSI 2016
ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.