Ezra 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
Kannada BSI Bible 2016
ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಪಠನವಾದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇವಿುಗೆ ಹೋಗಿ ಬಲಾತ್ಕಾರದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
Kannada Bible (KNCL) BSI 2016
ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು.