Ezra 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
Kannada BSI Bible 2016
ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್‍ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು.
Kannada Bible (KNCL) BSI 2016
ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.