Ezra 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ಶಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
Kannada BSI Bible 2016
ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಯೆರೂಸಲೇವಿುಗೆ ವಿರೋಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
Kannada Bible (KNCL) BSI 2016
ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಜೆರುಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.