Ezra 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
Kannada BSI Bible 2016
ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್‍ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ಯೆಹೂದ್ಯರನ್ನು ಪ್ರಬೋಧಿಸಲು
Kannada Bible (KNCL) BSI 2016
ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.