Ezra 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
Kannada BSI Bible 2016
ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.
Kannada Bible (KNCL) BSI 2016
ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.