Ezra 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.
Kannada BSI Bible 2016
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ತೆಗೆದುಕೊಂಡುಹೋಗಿ ಬಾಬೆಲಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇವಿುಸಿದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟು
Kannada Bible (KNCL) BSI 2016
ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.