Ezra 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.
Kannada BSI Bible 2016
ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇವಿುನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ತೀರಲಿಲ್ಲ ಎಂಬದಾಗಿ ಉತ್ತರಕೊಟ್ಟರು.
Kannada Bible (KNCL) BSI 2016
ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.