Ezra 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
Kannada BSI Bible 2016
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
Kannada Bible (KNCL) BSI 2016
ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.