Ezra 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.
Kannada BSI Bible 2016
ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ
Kannada Bible (KNCL) BSI 2016
ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.