Ezra 6:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
Kannada BSI Bible 2016
ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ ಅದಕ್ಕೆ ಅವನನ್ನು ಎತ್ತಬೇಕೆಂದೂ ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದೂ ತೀರ್ಮಾನಿಸುತ್ತೇನೆ.
Kannada Bible (KNCL) BSI 2016
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.