Ezra 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
Kannada BSI Bible 2016
ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.
Kannada Bible (KNCL) BSI 2016
ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು.