Ezra 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
Kannada BSI Bible 2016
ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
Kannada Bible (KNCL) BSI 2016
ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.