Ezra 6:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.
Kannada BSI Bible 2016
ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ [ಲೇವಿಯರು] ಸೆರೆಯಿಂದ ಬಂದವರಿಗೋಸ್ಕರವೂ ತಮ್ಮ ಬಂಧುಗಳಾದ ಯಾಜಕರಿಗೋಸ್ಕರವೂ ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.
Kannada Bible (KNCL) BSI 2016
ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.