Ezra 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.
Kannada BSI Bible 2016
ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್‌ ಮಕ್ಕಳು ಇಸ್ರಾಯೇಲ್‌ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು.
Kannada Bible (KNCL) BSI 2016
ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,