Ezra 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.
Kannada BSI Bible 2016
ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ಬಾಬೆಲಿಗೆ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರದ ದೇವಸ್ಥಾನಪಾತ್ರೆಗಳನ್ನು ತಿರಿಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇವಿುನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು ಎಂಬದಾಗಿ ಬರೆದಿತ್ತು.
Kannada Bible (KNCL) BSI 2016
ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.