Ezra 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.
Kannada BSI Bible 2016
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ
Kannada Bible (KNCL) BSI 2016
ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.