Ezra 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
Kannada BSI Bible 2016
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು -
Kannada Bible (KNCL) BSI 2016
ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು: