Ezra 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
Kannada BSI Bible 2016
ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.
Kannada Bible (KNCL) BSI 2016
ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.