Ezra 7:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
Kannada BSI Bible 2016
ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.
Kannada Bible (KNCL) BSI 2016
ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”