Ezra 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
Kannada BSI Bible 2016
ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
Kannada Bible (KNCL) BSI 2016
“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.