Ezra 7:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
Kannada BSI Bible 2016
ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.
Kannada Bible (KNCL) BSI 2016
ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”