Ezra 8:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
Kannada BSI Bible 2016
ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ
Kannada Bible (KNCL) BSI 2016
ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.