Ezra 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
Kannada BSI Bible 2016
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
Kannada Bible (KNCL) BSI 2016
ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.