Ezra 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
Kannada BSI Bible 2016
ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ನಾನು ಅವರಿಗೆ - ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
Kannada Bible (KNCL) BSI 2016
ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.