Ezra 8:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
Kannada BSI Bible 2016
ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
Kannada Bible (KNCL) BSI 2016
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.