Ezra 8:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
Kannada BSI Bible 2016
ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.
Kannada Bible (KNCL) BSI 2016
ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.