Ezra 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.
Kannada BSI Bible 2016
ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆ ಮಾಡಿಕೊಳ್ಳೋಣ! ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವಕಟಾ!
Kannada Bible (KNCL) BSI 2016
ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.