Ezra 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
Kannada BSI Bible 2016
ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
Kannada Bible (KNCL) BSI 2016
ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.