Ezra 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.
Kannada BSI Bible 2016
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;
Kannada Bible (KNCL) BSI 2016
ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.