Ezra 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?
Kannada BSI Bible 2016
ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?
Kannada Bible (KNCL) BSI 2016
ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?