Ezra 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.
Kannada BSI Bible 2016
ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.
Kannada Bible (KNCL) BSI 2016
ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ.