Ezra 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:
Kannada BSI Bible 2016
ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇಹದಂಡನೆಮಾಡುವದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನಂದರೆ -
Kannada Bible (KNCL) BSI 2016
ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,