Ezra 9:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.
Kannada BSI Bible 2016
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.
Kannada Bible (KNCL) BSI 2016
ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ