Galatians 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
Kannada BSI Bible 2016
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
Kannada Bible (KNCL) BSI 2016
ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.