Galatians 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
Kannada BSI Bible 2016
ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಿಸಿದನು.
Kannada Bible (KNCL) BSI 2016
ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.