Galatians 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Kannada BSI Bible 2016
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Kannada Bible (KNCL) BSI 2016
ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.