Galatians 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
Kannada BSI Bible 2016
ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
Kannada Bible (KNCL) BSI 2016
ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.