Galatians 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
Kannada BSI Bible 2016
ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ
Kannada Bible (KNCL) BSI 2016
ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.