Galatians 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.
Kannada BSI Bible 2016
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
Kannada Bible (KNCL) BSI 2016
ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.