Galatians 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
Kannada BSI Bible 2016
ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Kannada Bible (KNCL) BSI 2016
ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.