Galatians 1:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
Kannada BSI Bible 2016
ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ
Kannada Bible (KNCL) BSI 2016
‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.