Galatians 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
Kannada BSI Bible 2016
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.
Kannada Bible (KNCL) BSI 2016
ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.