Galatians 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
Kannada BSI Bible 2016
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು ನಾವೇ ಆಗಲಿ ಪರಲೋಕದಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಶಾಪಗ್ರಸ್ತನಾಗಲಿ.
Kannada Bible (KNCL) BSI 2016
ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.